ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಟಾರ್ಚರ್ ಗೆ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಕಣ್ಣೀರು ಹಾಕುತ್ತಲೆ ರಾಜಿನಾಮೆ ಘೋಷಣೆ

ಮೈಸೂರು ನಗರ ಪಾಲಿಕೆ ಆಯುಕ್ತೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಏನು ಕೆಲಸ ಮಾಡಿಲ್ಲ ಎಂಬ ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಂಧೂರಿ ವಿರುದ್ಧ ಆರೋಪಿಸಿದ್ದಾರೆ…

ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಅಂತಾರೆ. ಜಿಲ್ಲಾಧಿಕಾರಿ ಈ ರೀತಿ ಹೇಳುತ್ತಿದ್ದಾರೆ.

ಜಿಲ್ಲಾಡಳಿತದಿಂದ‌ ನಮಗೆ ಯಾವುದೇ ಸಹಕಾರ ದೊರೆತಿಲ್ಲ ಎಂದು ಆಯುಕ್ತೆ ಶಿಲ್ಪಾನಾಗ್​, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಡಿಸಿ ಸಿಂಧೂರಿ ವಿರುದ್ಧ ಅಸಮಾಧಾನ ಹೊರಹಾಕಿದ ಆಯುಕ್ತೆ ಶಿಲ್ಪಾನಾಗ್​​​‘ಸಿಎಸ್‌ಆರ್​​ ಫಂಡ್‌ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು..? ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಅಂತ ಅಸಮಾಧಾನ ಹೊರ ಹಾಕಿದ್ದಾರೆ.

ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ. ಅವರ ಈಗೋದಿಂದ ನಾವು ಮಾಡುವ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ. ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ.

ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ ಎಂದು ಶಿಲ್ಪಾನಾಗ್​ ಬೇಸರ ವ್ಯಕ್ತಪಡಿಸಿದ್ದಾರೆ,

ಅವರು ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ, ಇಂತಹವರು ಮೈಸೂರಿನಂಥ ಜಿಲ್ಲೆಯಲ್ಲಿ ಇರಬಾರದು. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ,

ನಾನು ಬೇಸರದಿಂದ ಹೇಳುತ್ತಿದ್ದೇನೆ ಇಂತಹ ಅಧಿಕಾರಿ ಯಾವ ಜಿಲ್ಲೆಗೂ ಬೇಡ. ನನಗೆ ಆ ಜಾತಿ, ಈ ಜಾತಿ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ನಾನು ಕರ್ನಾಟಕದವಳಾದರೂ ಇಲ್ಲೇ ಹುದ್ದೆ ಕೊಡಿ ಎಂದು ಕೇಳಿದವಳಲ್ಲ.
ನಾನು ರಾಜೀನಾಮೆ ಕೊಟ್ಟು ಬೇರೆ ಜೀವನ ನಡೆಸುತ್ತೇನೆ‌ ಎಂದು ತಮ್ಮ ರಾಜಿನಾಮೆ ವಿಚಾರವನ್ನು ದುಃಖದಿಂದಲೇ ಹಂಚಿಕೊಂಡರು..

Leave a Reply

Your email address will not be published. Required fields are marked *

You cannot copy content of this page