ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸಲಾಗಿದೆ ಮೈಸೂರಿನಲ್ಲಿಯೂ ಬೆಂಬಲ ವ್ಯಕ್ತವಾಗಿದೆ .
ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಕಾಂಗ್ರೆಸ್ ನ ಯುವ ಮುಖಂಡ ನವೀನ್ ಕುಮಾರ್ , ಮತ್ತು ಯುತ್ ಕಾಂಗ್ರೆಸ್ ನ ಮೊಹಮ್ಮದ್ ಹ್ಯಾರಿಸ್ ನೇತೃತ್ವದಲ್ಲಿ ಮಾನಂದವಾಡಿ ರಸ್ತೆಯಲ್ಲಿರುವ ಎನ್ ಐ ಕಾಲೇಜು ಎದುರು ಇರುವ ಪೆಟ್ರೋಲ್ ಬಂಕ್ ಮುಂಭಾಗ ವಿವಿಧ ಘೋಷಣೆಗಳ ಕೂಗುವ ಮೂಲಕ ಪ್ರತಿಭಟನೆ ನಡೆಸಲಾಯಿತು,
ಇದೆ ಸಂಧರ್ಭದಲ್ಲಿ ಪ್ರತಿಭಟನಾಕಾರರು ಮಾತನಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬ್ಯಾರೆಲ್ ಬೆಲೆ ಕಡಿಮೆ ಇದ್ದರೂ ಸಹ ಕೇಂದ್ರ ಸರ್ಕಾರ ಸಾರ್ವಜನಿಕರ ಮೇಲೆ ಅಧಿಕ ತೆರಿಗೆ ಹೊರಿಸಿ ಶತಕ ಬಾರಿಸಿದೆ .
ಯುತ್ ಕಾಂಗ್ರೆಸ್ ಸೇರಿದಂತೆ ಎಲ್ಲಾ ಕಾರ್ಯಕರ್ತರುಗಳು ಮೈಸೂರು ಜಿಲ್ಲೆಯ ಎಲ್ಲ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸಿದ್ದೇವೆ .
ಪೆಟ್ರೋಲ್ ದರ 100 ರೂ.ದಾಟಿದೆ ಇದನ್ನು ಖಂಡಿಸಿ ಜನಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ನೂರು ನಾಟೌಟ್ ಎನ್ನುವ ಶೀರ್ಷಿಕೆ ಯೊಂದಿಗೆ ಇಂದು ಎಚ್ಚರಿಕೆ ನೀಡುತ್ತಿದ್ದೇವೆ ಎಂದು ತಿಳಿಸಿದರು,
ಇದೆ ರೀತಿ ಮೈಸೂರಿನ ವಿವೇಕಾನಂದ ನಗರದಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿಯೂ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು ,
ಪ್ರತಿಭಟನೆ ಯಲ್ಲಿ ರಾಜೇಶ್, ಪೈಲ್ವಾನ್ ಸುನೀಲ್, ನೌಫಿಲ್ , ಶೋಭ ರಾಜೇಶ್ , ವಿಷ್ಣು, ಚಂದ್ರು, ಭರತ್ ಕುಮಾರ್,ಪವನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.