ಒಂದು ದೇಶ ಒಂದು ಚುನಾವಣೆ ಸ್ವಾಗತಿಸಿ ಶಾಲಾ ಮಕ್ಕಳಿಗೆ ಪುಸ್ತಕ ಸಿಹಿ ವಿತರಿಸಿ ಸಂಭ್ರಮಿಸಿದರು

ಮೈಸೂರು ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ
ಒಂದು ದೇಶ ಒಂದು ಚುನಾವಣೆ ಕೇಂದ್ರ ಸರ್ಕಾರದ ಐತಿಹಾಸಿಕ ತೀರ್ಮಾನ ಸ್ವಾಗತಿಸಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಿಸಿ ಸಂಭ್ರಮಿಸಿದರು

ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷರಾದ ಜೋಗಿ ಮಂಜು ಮಾತನಾಡಿ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವ ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ

ಮಾಜಿನಗರಪಾಲಿಕ ಎಂ ಡಿ ಪಾರ್ಥಸಾರಥಿ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ
ಮೋದಿ ದೇಶ ಕಂಡ ಅತ್ಯಂತ ಶ್ರೇಷ್ಠ ಪ್ರಧಾನಿ. ಅವರ ನಾಯಕತ್ವದಲ್ಲಿ ಭಾರತ ವಿಶ್ವದಲ್ಲೇ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದರು

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ
ಬಿಜೆಪಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿಸಾಗಿದೆ. ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಕೋಮು ಗಲಭೆಗಳು, ನಾಗರಿಕರಿಗೆ ತೊಂದರೆ ಆಗು ವಂತಹ ಘಟನೆಗಳು, ಉಗ್ರಗಾಮಿ ಚಟುವ ಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ಹಾಗಾ ಗಿಯೇ ದೇಶದ ಜನರು ಅವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮಾಜಿನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಚಕ್ರಪಾಣಿ, ಸುಚೇಂದ್ರ, ಕೃಷ್ಣೆಗೌಡ, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಆನಂದ್, ರಾಕೇಶ್, ಹಾಗೂ ಇನ್ನಿತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

You cannot copy content of this page