LOHITH HANUMANTHAPPA
ಸೆಪ್ಟೆಂಬರ್ 20 ರಿಂದ ಸಪ್ಟೆಂಬರ್ 26 ರವರೆಗೆ ಭಾರತ ಸರಕಾರದ ಜವಳಿ ಮಂತ್ರಾಲಯ ಇಲಾಖೆಯ ವತಿಯಿಂದ ಗಾಂಧಿ ಶಿಲ್ಪ ಬಜಾರ್ ಹಾಗೂ ಸೆಪ್ಟೆಂಬರ್ 20 ರಿಂದ ಸಪ್ಟೆಂಬರ್ 29 ರವರೆಗೆ “ಗುಜರಾತ್ ರಾಜ್ಯ ಕೈಮಗ್ಗ ಮತ್ತು ಕರಕುಶಲ ಅಭಿವೃದ್ಧಿ ನಿಗಮ ಲಿ ಇವರ ಪ್ರಾಯೋಜಕತ್ವದಲ್ಲಿ ಗರ್ವಿ ಗುರ್ಜರಿ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟಕ್ಕೆ ಮೈಸೂರು ಮಹಾರಾಜರು ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು
ದೇಶದ ಹಲವು ರಾಜ್ಯಗಳಿಂದ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಕುಶಲಕರ್ಮಿಗಳು ಸೇರಿದಂತೆ ಸುಮಾರು 50 ರಿಂದ 60 ಕುಶಲಕರ್ಮಿಗಳು, ಕೈಮಗ್ಗ ನೇಕಾರರು ತಮ್ಮ ಉತ್ಕೃಷ್ಟ ಕಲಾವಸ್ತುಗಳನ್ನು ಮೈಸೂರಿನಲ್ಲಿ ನಡೆಯುವ ಪ್ರದರ್ಶನದಲ್ಲಿ ಅನಾವರಣಗೊಳಿಸಲಿದ್ದಾರೆ.
ಮರದ ಕೆತ್ತನೆ, ಶಿಲಾ ಶಿಲ್ಪ, ಕಂಚಿನ ವಿಗ್ರಹಗಳು, ಮರದ ಕುಂದಣ ಕಲೆ, ಮಣ್ಣಿನ ಮಡಿಕೆಗಳು, ಪೇಪರ್, ರತ್ನಗಂಬಳಿ, ಹತ್ತಿ ಜಮಕಾನ, ಇಮಿಟೇಶನ್ ಆಭರಣಗಳು, ಮರದ ಅರಗಿನ ಕಲಾವಸ್ತುಗಳು, ಬಾಟಿಕ್, ಕಲಾಂಕಾರಿ ಚಿತ್ರಕಲೆ, ಚರ್ಮದ ಅಕರ್ಷಕ ವಸ್ತುಗಳು,ಕಲಾತ್ಮಕ ಚರ್ಮದ ಚಪ್ಪಲಿಗಳು, ಚನ್ನಪಟ್ಟಣದ ಗೊಂಬೆಗಳು, ಕಸೂತಿ ಕಲೆ, ಮಹೇಶ್ವರಿ, ಚಂದೇರಿ ಸೀರೆಗಳು, ಪಟ್ಟ ಚಿತ್ರ, ಬೆಳ್ಳಿಯ ಸೂಕ್ಷ್ಮ ವಿನ್ಯಾಸ ವಸ್ತುಗಳು, ಬಿದಿರು-ಬೆತ್ತದ ವಸ್ತುಗಳು, ಚಿಕನ್ ಎಂಬ್ರಾಯ್ಡರಿ, ಡ್ರೈ ಪ್ಲವರ್ಗಳು, ಕಲಾತ್ಮಕ ಕಲ್ಲಿನ ವಸ್ತುಗಳು, ಫುಲ್ಕಾರಿ ಬಟ್ಟೆ ಗಳು ಈ ಮೇಳ ದಲ್ಲಿ ಒಂದೇ ಸೂರಿನಡಿ ಖರೀದಿಗೆ ಸಿಗಲಿದೆ.
ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ ಸಪ್ಟೆಂಬರ್ -20 ರಿಂದ 29 ರ ವರೆಗೆ ಪ್ರಪ್ರಥಮ ಬಾರಿಗೆ ಗರ್ವಿ ಗುರ್ಜರಿ ಹಸ್ತ ಕಲಾ ಮೇಳ , ಮೊದಲ ಬಾರಿಗೆ ಗುಜರಾತ್ ರಾಜ್ಯದ ಅಂಗ ಸಂಸ್ಥೆಯಾಗಿರುವ “ಗುಜರಾತ್ ರಾಜ್ಯ ಕೈಮಗ್ಗ ಮತ್ತು ಕರಕುಶಲ ಅಭಿವೃದ್ಧಿ ನಿಗಮ ಲಿ” ಇವರ ಪ್ರಾಯೋಜಕತ್ವದಲ್ಲಿ ಪ್ರಾಂತೀಯ ಮೇಳವಾದ ಗರ್ವಿ ಗುರ್ಜರಿ ಹಸ್ತ ಕಲಾ ಮೇಳ 2024 ರನ್ನು ದಿನಾಂಕ 20-09-2024 ರಿಂದ 29-09-2024 ರವರೆಗೆ ಆಯೋಜನೆ ಮಾಡಲಾಗಿದೆ.
ಮೇಳದ ವಿಶೇಷತೆಗಳು: ಈ ಬಾರಿಯ ಮೇಳವು ಹಿಂದಿನ ಮೇಳಗಳಿಗಿಂತ ವಿಭಿನ್ನವಾಗಿ ಇರಲಿದೆ. ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರೀಯಾಶೀಲರಾಗಿರುವ ಸುಮಾರು 30 ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸುವರು. ಕುಶಲಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್ಗಳು, ಟವಲ್ಗಳು, ಕುಶನ್ ಕವರ್ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ. ಮೇಳದ ವಿಶೇಷ ಎಂದರೆ ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಒದಗಿಸುವ ಪ್ರಯತ್ನವನ್ನು ಗುಜರಾತ್ ಸರ್ಕಾರ ಮಾಡುತ್ತಿದೆ. ಈ ಕಾರಣದಿಂದಾಗಿ ಮೈಸೂರು ಹಾಗು ಸುತ್ತಮುತ್ತಲಿನ ಗ್ರಾಹಕರಿಗೆ ಗುಜರಾತ್ ಸಂಸ್ಕೃತಿಯ ಉಡುಗೆ-ತೊಡುಗೆಗಳು ಮತ್ತು ಆಲಂಕಾರಿಕ ವಸ್ತುಗಳು ನೇರವಾಗಿ, ಉತ್ತಮ ಗುಣಮಟ್ಟದಲ್ಲಿ, ಕಡಿಮೆ ಬೆಲೆಗೆ ದೊರೆಯಲಿದೆ.
ಈ ಮೇಳಕ್ಕೆ ಪ್ರವೇಶವು ಉಚಿತವಾಗಿರುತ್ತದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೈಸೂರು ನಗರ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ಬಸ್ ನಂ.117/1 ರ ಬಸ್ಸುಗಳು ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ಗೆ ಸಂಚರಿಸಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ ಸಿ.ಜಿ. ಬೆಟಸೂರಮಠ, ಕಾರ್ಯನಿರ್ವಾಹಕ ಕಾರ್ಯದರ್ಶಿಗಳು, ಜೆಎಸ್ಎಸ್ ಮಹಾವಿದ್ಯಾಪೀಠ ರವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ,
ಶ್ರೀಮತಿ ಶಿಲ್ಪಿ ಅಗರ್ವಾಲ್,ಐ.ಆರ್.ಎ.ಎಸ್.
ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಮೈಸೂರು ವಿಭಾಗ, ಡಾ. ಪಾರುಲ್ ಮನ್ಸಟ ಗುಜರಾತ್ ರಾಜ್ಯ ಕೈಮಗ್ಗ ಮತ್ತು ಕರಕುಶಲ ಅಭಿವೃದ್ಧಿ ನಿಗಮ ಲಿ. , ಸುನಿಲ್ಕುಮಾರ್ ಸಹಾಯಕ ನಿರ್ದೇಶಕರು, ಕರಕುಶಲ ಸೇವಾ ಕೇಂದ್ರ ಜವಳಿ ಮಂತ್ರಾಲಯ, ಆಗಮಿಸಿದ್ದರು.