ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇದೀಗ ಸಂಕಷ್ಟ ಎದುರಾಗಿದ್ದು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ನ್ಯಾ. ನಾಗಪ್ರಸನ್ನ ತೀರ್ಪು ಪ್ರಕಟಿಸಿದ್ದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದಾರೆ. ಹಾಗೆಯೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ಖಾಸಗಿ ದೂರುದಾರರೇ ಅನುಮತಿ ಕೋರಬಹುದು. 17ಎ ಅಡಿ ಅನುಮತಿ ಕೋರಿದ್ದುಸರಿಯಾಗಿದೆ. ಸಚಿವ ಸಂಫುಟದ ಶೀಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ ಎಂದು ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ.