ಸಿನಿಮಾ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಈ ವಾರದ ಬಿಗ್ ಬಾಸ್ ಶೋ ನಡೆಸಿಕೊಡುತ್ತಿಲ್ಲ.
ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ ಶೋ ನಡೆಸಿಕೊಡುತ್ತಿದ್ದ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಈ ವಾರ ಬಿಗ್ ಬಾಸ್ ನಿರೂಪಣೆ ಮಾಡುತ್ತಿಲ್ಲ.
ನಿನ್ನೆಯಷ್ಟೇ ಕಿಚ್ಚ ಸುದೀಪ್ ಆರೋಗ್ಯ ಸರಿಯಿಲ್ಲ ಎಂಬ ಕಾರಣಕ್ಕೆ, ಬಿಗ್ ಬಾಸ್ ವಾರದ ಕಾರ್ಯಕ್ರಮ ಇರಲ್ಲ ಅಂತ ಹೇಳಲಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು, ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ.
ಆದರೆ, ವೈದ್ಯರು ಇನ್ನೂ ಕೆಲ ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ, ಬಿಗ್ಬಾಸ್ ಕನ್ನಡ 8ನೇ ಸೀಸನ್ನ ಈ ವೀಕೆಂಡ್ನ ಎಪಿಸೋಡ್ನಲ್ಲಿ ನಾನು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.