ಪ್ರಸಿದ್ಧ ಸ್ಟಾರ್ ಹಾಸ್ಯನಟ ಪದ್ಮಶ್ರೀ ಡಾ ವಿವೇಕ್ (59 ವರ್ಷ) ಇಂದು ಮುಂಜಾನೆ 04.35ಕ್ಕೆ ಚೆನೈನಲ್ಲಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನ ನಿನ್ನೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ವಿವೇಕ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಚಿಕಿತ್ಸೆಗೆ ಸ್ಪಂಧಿಸದೆ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
35 ವರ್ಷಗಳ ಕಾಲ ಬೆಳ್ಳಿ ಪರದೆಯಲ್ಲಿ ಸಿನಿಮಾ ಪ್ರೇಕ್ಷಕರನ್ನು ರಂಜಿಸಿದ ಕಲಾವಿದ ಇನ್ನು ನೆನಪು ಮಾತ್ರ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ.