ಕ್ರಿಕೆಟ್: ವಿಶ್ವ ಕ್ರಿಕೆಟ್ನ ಶ್ರೇಷ್ಠ ಫೀಲ್ಡರ್ಗಳಲ್ಲಿ ಒಬ್ಬರೆನಿಸಿಕೊಂಡಿರುವ ರವೀಂದ್ರ ಜಡೇಜಾ, ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಶುಕ್ರವಾರ(ಏ.16) ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೆ.ಎಲ್.ರಾಹುಲ್ರನ್ನು ರನೌಟ್ ಮಾಡಿದ ಜಡೇಜಾ, ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ರನೌಟ್ (22)ಗಳನ್ನು ಮಾಡಿದ ಆಟಗಾರ ಎನ್ನುವ ಹಿರಿಮೆಗೆ ಪಾತ್ರರಾದರು. ಇದರೊಂದಿಗೆ ತಮ್ಮ ಚೆನ್ನೈ ಸೂಪರ್ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಹೆಸರಿನಲ್ಲಿದ್ದ 21 ರನೌಟ್ಗಳ ದಾಖಲೆಯನ್ನು ಮುರಿದರು.