ಗೋಲಿಬಾರ್ , ಎಕೆ 47 , ಸಿಂಹದ ಮರಿಯಂತ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಮಹಾಮಾರಿ ಕೊರೊನಾ ಗೆ ಬಲಿಯಾಗಿದ್ದಾರೆ
ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು .
ಆದರೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ . 52 ವರ್ಷದ ರಾಮು ಅವರಿಗೆ ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು . ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ . ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು . ಹೆಚ್ಚು ಹಣ ಹೂಡಿಕೆ ಮಾಡಿ ಅದ್ದೂರಿಯಾಗಿ ಚಿತ್ರ ನಿರ್ಮಾಣ ಮಾಡಿದ ಕಾರಣಕ್ಕೆ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿದ್ದರು . ರಾಮು ಅವರು ಪತ್ನಿ , ಮಗ ಮತ್ತು ಮಗಳನ್ನು ಅಗಲಿದ್ದಾರೆ