ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ತೌಕ್ತೆ ಚಂಡಮಾರುತ ಉಗ್ರ ಸ್ವರೂಪ ಪಡೆದಿದ್ದು ಇನ್ನೂ ಮೂರುದಿನಗಳು ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಮೇ 18 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕೆಲವೆಡೆ 20 ಸೆ.ಮೀ. ವರೆಗೂ ಮಳೆಯಾಗಬಹುದು.
ಮೇ 18 ರವರೆಗೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದ ತಿರುವನಂತಪುರಂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ತೌಕ್ತೆಯ ಒಡೆತಕ್ಕೆ ಸಮುದ್ರ ದಂಡೆಯ ಸಾಕಷ್ಟು ಮನೆಗಳು , ಭೂ ಪ್ರದೇಶಗಳು ತೌಕ್ತೆಯ ಪಾಲಾಗಿದೆ..
ಲಕ್ಷದ್ವೀಪ ಬಳಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ‘ತೌಕ್ತೆ’ ಚಂಡಮಾರುತ ಶನಿವಾರ ತೀವ್ರ ಸ್ವರೂಪ ಪಡೆದುಕೊಂಡಿದೆ.
ಗಂಟೆಗೆ 175 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗುತ್ತಿದ್ದು. ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಜೊತೆಗೆ ತಮಿಳುನಾಡು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ವರದಿ: ಲೋಹಿತ್ ಹನುಮಂತಪ್ಪ.