ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕನಸು ಇಂದು ನನಸಾಗಿದೆ…
ಕನ್ನಡ ನಾಡಿನ ಅರಣ್ಯಸಂಪತ್ತು, ವನ್ಯಜೀವಿ ಸಂಪತ್ತಿನ ಬಗ್ಗೆ ಪುನೀತ್ ಕನಸಿನ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್‌ನ ಟೀಸರ್ ಇಂದು ಬಿಡುಗಡೆಯಾಗಿದೆ…
ಪಾರ್ವತಮ್ಮ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಿದೆ..
ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‌ಕುಮಾರ್ ಪ್ರಯಾಣಿಸುವುದನ್ನು ಕಾಣಬಹುದಾಗಿದೆ.
ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ.
ಕೊನೆಯಲ್ಲಿ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ.
ಟೀಸರ್ ಜೊತೆಗೆ ಅಪ್ಪು ಅವರ ಕನಸಿದು, ಅದ್ಭುತ ಪಯಣ, ನಮ್ಮ ನೆಲದ ಘನತೆಯನ್ನು ಮೆರೆಸುವ ಕಥನ, ಮರುಕಳಿಸಿದ ಚರಿತ್ರೆಯಿದು ‘ಗಂಧದ ಗುಡಿ’ ಎಂದು ಕ್ಯಾಪ್ಷನ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬರೆದುಕೊಂಡಿದ್ದಾರೆ.
ಮತ್ತೊಂದೆಡೆ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಅವರು ಸಹ ಟೀಸರ್ ಅನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ…
ಅಮೋಘ ವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ ೨೦೨೨ರಲ್ಲಿ ತೆರೆಕಾಣಲಿದೆ. ನಿನ್ನೆಯಷ್ಟೇ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ‘ಹಿಂದೆಂದೂ ಕಾಣದ ಸಿನಿಮಾ ಅನುಭವ. ನಿಮ್ಮ ಮುಂದೆ’ ಎಂದು ಟ್ವೀಟ್ ಮಾಡಿದ್ದರು.
ಈ ಮೂಲಕ ಟೀಸರ್ ಬಿಡುಗಡೆ ಬಗ್ಗೆ ಮಾಹಿತಿ ನೀಡಿದ್ದರು.
ನವೆಂಬರ್ ೧ರ ಕನ್ನಡ ರಾಜ್ಯೋತ್ಸವದಂದು ಅಪ್ಪು ಈ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು.
ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಅದೇ ಗಂಧದ ಗುಡಿ…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಸರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ….
ಒಟ್ಟಾರೆ ಗಂಧದ ಗುಡಿ ಯಲ್ಲಿ ಮತ್ತೆ ಹುಟ್ಟಿ ಬರುತ್ತಿರುವ ಕರ್ನಾಟಕ ರತ್ನ ಪುನಿತ್ ರಾಜ್ ಕುಮಾರ್ ಅವರನ್ನು ನೋಡಿ ಕಣ್ತುಂಬಿಕೊಳ್ಳಲು , ಪುನಃ ತೆರೆಯ ಮೇಲೆ ನೋಡುವ ತವಕದಲ್ಲಿ ನೊಂದ ಅಭಿಮಾನಿ ಮನಸ್ಸುಗಳು ಕಾಯುತ್ತಿವೆ..
ಲೋಹಿತ್ ಹನುಮಂತಪ್ಪ ನ್ಯೂಸ್ ೮೪ ಕನ್ನಡ.