ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದೆಂಬ ದೃಷ್ಟಿಯಿಂದ 28ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ ಎಂದರು.
ಕಳೆದ ವರ್ಷ ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿರುವವರನ್ನು ಸಂಪರ್ಕಿಸಿ ಮತ್ತೆ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮನವೊಲಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ಎಲ್ಲಾ 11 ವಿಧಾನ ಸಭಾ ಕ್ಷೇತ್ರಗಳಲ್ಲೂ ಕೋವಿಡ್ ಪ್ರಗತಿ ಪರಿಶೀಲನೆ ಮಾಡಲಾಗಿದೆ. ಹೆಚ್.ಡಿ.ಕೋಟೆಯ ಸರಗೂರಿಗೆ ಇಂದು ಭೇಟಿ ನೀಡಿ 30ಬೆಡ್ ಸಾಮರ್ಥ್ಯದ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಅಭಾವ ಇಲ್ಲ. ಪ್ರಸ್ತುತ ಆಡಳಿತ ವಿಕೇಂದ್ರೀಕರಣ ಮಾಡಿ, ಟಾಸ್ಕ್ ಫೋರ್ಸ್ ರಚಿಸುವ ಮೂಲಕ ಅಧಿಕಾರವನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಬಲ ಬೆಲೆ ಯೋಚನೆಯಡಿ ರಾಗಿ ಮತ್ತು ಭತ್ತ ಮಾರಾಟ ಮಾಡಿದ ರೈತರಿಗೆ ಪಾವತಿಸಲು 130 ಕೋಟಿ ಬಿಡಗಡೆ ಮಾಡಲಾಗಿದ್ದು, ಸುಮಾರು 17 ಸಾವಿರ ರೈತರ ಬ್ಯಾಂಕ್ ಖಾತೆಗೆ ಈಗಾಗಲೆ ಜಮಾ ಆಗಿದೆ ಎಂದರು.
ಇದೆ ವೇಳೆ ಸಂಸದ ಪ್ರತಾಪ್ ಸಿಂಹ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಅಧ್ಯಕ್ಷ ಅಪ್ಪಣ್ಣ, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಮೃಗಾಲಯ ಪ್ರಾಧಿಕಾರದ ಕಾರ್ಯದರ್ಶಿ ಬಿ.ಪಿ.ರವಿ, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ, ಮತ್ತಿತರರು ಹಾಜರಿದ್ದರು.