ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ.
ಜ್ವರದಿಂದ ಬಳಲುತಿದ್ದ ಕಾರಣ ಎರಡು ದಿನಗಳ ಹಿಂದೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಪರೀಕ್ಷೆಯ ವರದಿ ನೆಗೆಟಿವ್ ಬಂದಿತ್ತು. ಇಂದು ಮತ್ತೆ ಜ್ವರ ಕಾಣಿಸಿಕೊಂಡ ಕಾರಣ ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪರೀಕ್ಷಾ ವರದಿ ಕೊರೋನ ಪಾಸಿಟಿವ್ ಬಂದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಕೊರೋನ ಪಾಸಿಟಿವ್ ಹಿನ್ನೆಲೆಯಲ್ಲಿ ಕೋವಿಡ್ ಸಲಹೆ ಸೂಚನೆ ಪಡೆಯಲು ಭಾನುವಾರ ನಡೆಯಬೇಕಿದ್ದ ಸರ್ವಪಕ್ಷ ಸಭೆ ರದ್ದು ಮಾಡಲಾಗಿದೆ. ಸಭೆಗೆ ವಿಪಕ್ಷದ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು. ಸಿಎಂ ಸಂಪರ್ಕದಲ್ಲಿದ್ದ ಮಂತ್ರಿಗಳಿಗೂ ಕ್ವಾರಂಟೈನ್ ಹಾಗೂ ಕೋವಿಡ್ ಟೆಸ್ಟ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಮುಂದೂಡಿಕೆ ಮಾಡಲಾಗಿದೆ.