18 ಆನೆಗಳು ಸಾವನ್ನಪ್ಪಿರುವ ದುರ್ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ನಡೆದಿದೆ..
ಸಿಡಿಲು ಬಡಿದು ಆನೆಗಳು ಸಾವನ್ನಪ್ಪಿರೋದಾಗಿ ಅರಣ್ಯಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ,
ಈ ಸಂಬಂಧ ವನ್ಯಜೀವಿ ವಿಭಾಗದಮುಖ್ಯ ಸಂರಕ್ಷಣಾಧಿಕಾರಿ ಅಮಿತ್ ಶಾಯ್ ಮಾಹಿತಿ ನೀಡಿದ್ದು, ಘಟನೆ ನಡೆದ ಪ್ರದೇಶ ದುರ್ಗಮ ವಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಲು ತಡವಾಗಿತ್ತು, ಬೆಟ್ಟ ಪ್ರದೇಶವೊಂದರ ಮೇಲೆ 14, ಕೆಳಗೆ 4 ಆನೆಗಳ ಶವಗಳು ಪತ್ತೆಯಾಗಿದೆ ಎನ್ನಲಾಗಿದೆ,
ಆನೆಗಳು ಸಿಡಿಲು ಬಡಿದು ಮೃತಪಟ್ಟಿವೆ ಎಂಬ ಶಂಕೆ ವ್ಯಕ್ತವಾಗಿದೆ.
ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ…