ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ.
ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.