ಬೆಂಗಳೂರು: ರಾಜಕೀಯ ಬೇರೆ, ರಾಜಕೀಯೇತರ ಕಾರ್ಯಕ್ರಮಗಳು ಬೇರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿಂದು (ಆಗಸ್ಟ್ 28) ಖಾಸಗಿ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಡಿಸಿಎಂ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಒಟ್ಟಿಗೆ ಊಟ ಮಾಡಿದರು.