ಸಾರ್ವಜನಿಕರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ವಿದ್ಯಾಶಂಕರ್ ಅವರಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‌ ವಿತರಣೆ

ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಿದ್ದು ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ .

ಅಗತ್ಯ ವಸ್ತುಗಳ ಕೊಂಡುಕೊಳ್ಳಲು
ಎಂ ಜಿ ರಸ್ತೆಯ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಸಾರ್ವಜನಿಕರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಡಾ.ವಿದ್ಯಾಶಂಕರ್ ಅವರು ಮಾಸ್ಕ್ ಮತ್ತು ಸ್ಯಾನಿಟೈಸರ್‌ ವಿತರಣೆ ಮಾಡುವ ಮೂಲಕ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದರು .

ಕೆಎಸ್ ಒಯು ಕುಲಪತಿ ಡಾ.ವಿದ್ಯಾಶಂಕರ್ .ಎಸ್ ಅವರು ಕೊರೋನಾ ಜಾಗೃತಿ ಅಭಿಯಾನ ಮತ್ತು ಅರಿವು ಮೂಡಿಸುವ ಸಲುವಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಹಿಂಭಾಗದಲ್ಲಿರುವ ತರಕಾರಿ ಮಂಡಿಯಲ್ಲಿ ಸಾರ್ವಜನಿಕರಿಗೆ ಮಾಸ್ಕ್ & ಸ್ಯಾನಿಟೈಸರ್‌ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .

ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದ ಜನರಿಗೆ ಕೊರೋನಾ ಕುರಿತಂತೆ ಜಾಗೃತಿ ಮೂಡಿಸಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ ವಿತರಿಸಲಾಯಿತು..

ಈ ವೇಳೆ ಅಲ್ಲಿಯೇ ಇದ್ದ ಮಂಗಳಮುಖಿಯರಿಗೂ ಕೂಡ ಕುಲಪತಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿದರು..

ವರದಿ: ಲೋಹಿತ್ ಹನುಮಂತಪ್ಪ

Leave a Reply

Your email address will not be published. Required fields are marked *

You cannot copy content of this page