ಮೈಸೂರು: ವಸತಿ ಸಚಿವ ವಿ.ಸೋಮಣ್ಣ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮೈಸೂರಿಗೆ ಆಗಮಿಸಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಈ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಇಲ್ಲದೇ ಸರ್ವಪಕ್ಷ ಸಭೆ ನಡೆಸಿದರೆ ಅದಕ್ಕೆ ಗಂಭೀರತೆ ಇರುವುದಿಲ್ಲ. ಆದ್ದರಿಂದ ಅವರು ಗುಣಮುಖರಾಗಿ ಬಂದ ಬಳಿಕೆ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಯವರು ಇನ್ನು ಮೂರ್ನಾಲ್ಕು ದಿನಗಳಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬರುವ ವಿಶ್ವಾಸವಿದೆ. ಅವರು ಬಂದ ಬಳಿಕೆ ಸರ್ವಪಕ್ಷ ನಾಯಕರ ಜತೆ ಚರ್ಚೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿ, ಕೊರೊನಾ ಸೋಂಕು ಹಬ್ಬದಂತೆ ತಡೆಯಲು ಕೆಲ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿರುವುದು ಅನಿವಾರ್ಯ.
ಸದ್ಯ ನನ್ನ ಕ್ಷೇತ್ರ ಸೇರಿದಂತೆ ಎಲ್ಲೂ ಆಸ್ಪತ್ರೆಗಳ ಸಮಸ್ಯೆ ಇಲ್ಲ. ಸೋಂಕಿತರ ಶವಸಂಸ್ಕಾರ ವಿಚಾರದಲ್ಲಿ ಒಂದೆರಡು ನ್ಯೂನತೆಗಳಿತ್ತು ಅದನ್ನು ನಿನ್ನೆ ಸಭೆ ನಡೆಸಿ ಸರಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.