ಕ್ರಿಕೆಟ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಅಂಬಾಟಿ ರಾಯುಡು ಏಪ್ರಿಲ್ 10ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಹೌದು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕ್ ಔಟ್ ಆದ ಆಟಗಾರರ ಪಟ್ಟಿಯಲ್ಲಿ ಅಂಬಾಟಿ ರಾಯುಡು 13 ಪಂದ್ಯಗಳಲ್ಲಿ ಡಕ್ ಔಟ್ ಆಗುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ.
ಅಂಬಾಟಿ ರಾಯುಡು ಹೊರತುಪಡಿಸಿ ಉಳಿದಂತೆ ರೋಹಿತ್ ಶರ್ಮಾ, ಹರ್ಭಜನ್ ಸಿಂಗ್, ಅಜಿಂಕ್ಯಾ ರಹಾನೆ ಹಾಗೂ ಪಾರ್ಥಿವ್ ಪಟೇಲ್ ಸಹ ತಲಾ 13 ಐಪಿಎಲ್ ಪಂದ್ಯಗಳಲ್ಲಿ ಡಕ್ ಔಟ್ ಆಗಿದ್ದು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಔಟ್ ಆದ ಆಟಗಾರರು ಎಂಬ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ.