ಮೈಸೂರು ನಿರ್ಮಾತೃ ರಾಜರ್ಷಿ ನಾಲ್ವಡಿಯವರನ್ನ ಮರೆತಂತಿದೆ ಜಿಲ್ಲಾಡಳಿತ , ಅವರ ಪುಣ್ಯ ಸ್ಮರಣೆ ದಿನವಾದರೂ ಅವರ ಪುತ್ಥಳಿಗೆ ಇಲ್ಲ ಗೌರವ

ವರದಿ : ಲೋಹಿತ್ ಹನುಮಂತಪ್ಪ ಮೈಸೂರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜನಿಸಿದ್ದು ೧೮೮೪ ಜೂನ್ ೪ ರಂದು ಅವರು ನಿಧನರಾಗಿದ್ದು ೧೯೪೦ ಆಗಸ್ಟ್ ೦೩ ರಂದು.

ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು.

ಮೈಸೂರು ಸಂಸ್ಥಾನ ವಿಶ್ವಮಾನ್ಯವಾಗಿ ಸರ್ವಾಂಗೀಣ ಪ್ರಗತಿ ಹೊಂದಲು ಕಾರಣೀಭೂತರಾದವರು,
ಅಂತಹ ಮಹಾಪುರುಷರನ್ನು ಇಂದು ಜಿಲ್ಲಾಡಳಿತ ಕಡೆಗಣಿಸಿರುವುದು ದುರಂತ…

ನಾವು ಯಾವ ಯಾವುದನ್ನು ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅಂತಹ ಮಹನೀಯರ ಶ್ರೇಷ್ಠ ಸೇವೆ ಎಂದು ಕೊಂಡಾಡುತ್ತೇವೆಯೋ ಆ ಹಿರಿಮೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ ಕೂಡಾ ಮಹತ್ತರವಾದುದು.

1902ರ ಆಗಸ್ಟ್ 8ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು, ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ ,ಮೈಸೂರು ಸಂಸ್ಥಾನಕ್ಕೆ ‘ ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು.

*ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಗಳ ನೆನಪು*

ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು.

ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1905ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು.

*ಹೊಸ ರೈಲು ದಾರಿಗಳ ನಿರ್ಮಾಣ:*

ಮೈಸೂರು – ಅರಸೀಕೆರೆ,
ಬೆಂಗಳೂರು – ಚಿಕ್ಕಬಳ್ಳಾಪುರ,
ಚಿಕ್ಕಜಾಜೂರು – ಚಿತ್ರದುರ್ಗ,
ನಂಜನಗೂಡು – ಚಾಮರಾಜನಗರ,
ತರೀಕೆರೆ – ನರಸಿಂಹರಾಜಪುರ,
ಶಿವಮೊಗ್ಗ – ಆನಂದಪುರ ಈ ಎಲ್ಲ ರೈಲು ಮಾರ್ಗಗಳನ್ನು 1931ರ ವೇಳೆಗೆ ಪೂರೈಸಲಾಯಿತು .

*1907 ರಲ್ಲಿ ‘ವಾಣೀವಿಲಾಸ ಸಾಗರ’ ಕಟ್ಟಲ್ಪಟ್ಟಿತು.*

*1911 ರಲ್ಲಿ ಆರಂಭವಾದ ‘ಕೃಷ್ಣರಾಜ ಸಾಗರ’ ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. ಭಾರತದ, ಏಷ್ಯಾದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ಕೃಷ್ಣರಾಜಸಾಗರ ನಿರ್ಮಾಣದ ಕೀರ್ತಿ ನಾಲ್ವಡಿಯರಿಗೆ ಸಲ್ಲುತ್ತದೆ.*

*1932ರಲ್ಲಿ ಅಣೆಕಟ್ಟು ನಿರ್ಮಾಣದ ಕಾರ್ಯ ಪುರ್ಣಗೊಂಡಿತು.*

*1900ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು*.
ಇದರ ಫಲಿತಾಂಶವಾಗಿ 1905 ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು.

*1914ರಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ಸ್ಕೂಲನ್ನು ಆರಂಭಿಸಿದರು.*

*1934 – ಮಂಡ್ಯದಲ್ಲಿ ಮೈಸೂರು ಸಕ್ಕರೆ ಕಂಪೆನಿ ಪ್ರಾರಂಭ*

*1936 – ಮೊಟ್ಟ ಮೊದಲ ಮೈಸೂರು ಪೇಪರ್ ಮಿಲ್ ಆರಂಭ*

*ಜಾರಿ ಮಾಡಿದ ಸಾಮಾಜಿಕ ಕಾನೂನುಗಳು:*

1909ರಲ್ಲಿ ದೇವದಾಸಿ ಪದ್ಧತಿ ನಿಷೇಧ,
1910ರಲ್ಲಿ ಬಸವಿ ಪದ್ಧತಿ ರದ್ಧತಿ,
1910ರಲ್ಲಿ ’ಗೆಜ್ಜೆಪೂಜೆ’ ಪದ್ಧತಿ ಸಂಪೂರ್ಣ ನಿರ್ಮೂಲನೆ,
1936ಜುಲೈ ೧೪ ರಂದು ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆ ಜಾರಿ,
1936ಜುಲೈ ೭ ರಂದು ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆಯ ಜಾರಿ,
1936ಜುಲೈ ೭ ರಂದು ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ,
1914ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ,
1919ರಲ್ಲಿ ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ,
1927ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟಮೊದಲ ಬಾರಿಗೆ ಕಲ್ಪಿಸಿಕೊಟ್ಟರು ಅವರ ಸಾಧನೆಗಳು , ಕೊಡುಗೆಗಳು ಅಪಾರವಾದದ್ದು..

ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ ‘ಮಾದರಿ ಮೈಸೂರು’ ಎಂಬ ಕೀರ್ತಿ ಪ್ರಾಪ್ತವಾಯಿತು.

ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನ ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು ’ ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಗಾಂಧೀಜಿಯವರಿಂದಲೇ ‘ರಾಜರ್ಷಿ’ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಂಸೆ ಪಡೆದಿದ್ದರು…

ಇಂದು ಅವರ ಪುಣ್ಯ ಸ್ಮರಣೆ ಇದ್ದರು ಕೆ ಆರ್ ವೃತ್ತದಲ್ಲಿರುವ ಅವರ ಪುತ್ಥಳಿಗೆ ಗೌರವ ಸಲ್ಲಿಸಿಲ್ಲ ಎನ್ನುವುದು ದುಃಖದ ವಿಚಾರ,
ಇಂತಹ ಮಹಾನ್ ಚೇತನವನ್ನು ಕಡೆಗಣಿಸಿರುವುದು ಬಹುದೊಡ್ಡ ದುರಂತ ,

Leave a Reply

Your email address will not be published. Required fields are marked *

You cannot copy content of this page