1 ತಿಂಗಳು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು: ಮೈಸೂರಿನಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನಲೆ 1 ತಿಂಗಳು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಏರಲಾಗಿದೆ.

ಮೈಸೂರು ಜಿಲ್ಲೆಯ ದಕ್ಷಿಣಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯವು ಕೇಂದ್ರೀಯ ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಸದರಿ ಇಲಾಖೆಯ ಆದೇಶದಂತೆ ಕೋವಿಡ್ – 19 ಸೋಂಕು ಹೆಚ್ಚಾಗಿ ಹರಡುತ್ತಿರುವ ಕಾರಣ. ಇದನ್ನು ನಿಯಂತ್ರಿಸುವ ಸಲುವಾಗಿ ದಿನಾಂಕ 15/04/2021 ರಿಂದ 15/05/2021 ಅಥವಾ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ದೇವಾಲಯದ ಪ್ರವೇಶವನ್ನು ನಿರ್ಭಂದಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page