ನವೆಂಬರ್ 20ರಂದು ಕರೆ ನೀಡಿರುವ ಮದ್ಯದಂಗಡಿ ಬಂದ್‌ಗೆ ನಮ್ಮ ಬೆಂಬಲವಿಲ್ಲ.

ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನ.20ರಂದು ಕರೆ ನೀಡಿರುವ ಮದ್ಯದಂಗಡಿ ಬಂದ್‌ಗೆ ನಮ್ಮ ಬೆಂಬಲವಿಲ್ಲ.

ಅಂದು ನಾವು ಎಂದಿನಂತೆ ವ್ಯವಹಾರ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್‌ಮೆಂಟ್ ಕೋ-ಅಪ ರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಚಂದ್ರಶೇಖ‌ರ್ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು-ಚಾಮರಾಜನಗರ ಜಿಲ್ಲೆಗಳ ಸನ್ನದುದಾರರ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

2002-20030 ನೋಂದಣಿಯಾದ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿ ಯೇಷನ್ ಬಳಿಕ ನವೀಕರಣ ಮಾಡಿ ಕೊಂಡಿಲ್ಲ. ಹೀಗಾಗಿ ಅದು ಅಸ್ತಿತ್ವದಲ್ಲಿಲ್ಲ ಎಂದು ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯೇ
ದೃಢೀಕರಣ ಪತ್ರ ನೀಡಿದೆ. ಅದರ ಅಧ್ಯಕ್ಷ ಗುರುಸ್ವಾಮಿ ಮತ್ತು ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಅವರ ವೈಯಕ್ತಿಕ ಲಾಭಕ್ಕಾಗಿ ಬಂದ್‌ಗೆ ಕರೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇವೆ ಎಂದರು.

ಸಂಘ ಮಾಡಿದ ಸುಳ್ಳು ಆರೋಪ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಪ್ರತಿಧ್ವನಿಸಿ, ಸನ್ನದುದಾ ರರು ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಸರ್ಕಾರಕ್ಕೆ ಹಣ ನೀಡಿದ ದಾಖಲೆ ಇದ್ದು, ಅದನ್ನು ಬಹಿರಂಗಪಡಿ ಸಿದರೆ ನಾವೂ ಅವರ ಜೊತೆಗೆ ನಿಲ್ಲುತ್ತೇವೆ. ಅದು ಸಾಧ್ಯವಾಗದಿದ್ದರೆ ಆರೋಪ ಸುಳ್ಳು ಎಂಬುದನ್ನು ಒಪ್ಪಿಕೊಳ್ಳಲಿ. ಇಲ್ಲದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸನ್ನದುದಾರರಿಂದ ಹಫ್ತಾ ವಸೂಲಿ, ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಒಡ್ಡಲು ಹಾಗೂ ಸರ್ಕಾರವನ್ನು ಮುಜುಗರಕ್ಕೀಡು ಮಾಡಲು
ಗುರುಸ್ವಾಮಿ ಸಂಘ ಮಾಡಿಕೊಂಡಿದ್ದಾರೆ. – ಅವರಿಂದ ಸನ್ನದುದಾರರಿಗೆ ಯಾವುದೇ ಲಾಭ ವಾಗಿಲ್ಲ. ಅಧಿಕಾರಿಗಳ ವರ್ಗಾವಣೆ ಸರ್ಕಾರದ ನಿರ್ಧಾರ. ಆ ಸಂಘ ಅಧಿಕಾರಿ ಹಾಗೂ ಸಚಿವರಿಗೆ 500 ಕೋಟಿ ರೂ.ನಿಂದ 600 ಕೋಟಿ ರೂ.ನಷ್ಟು ಹಣ ನೀಡಿದ್ದೇವೆ ಎಂದು ಹೇಳಿಕೆ ಕೊಟ್ಟಿರುವುದು ಸತ್ಯಕ್ಕೆ ದೂರವಾದುದು ಎಂದರು.

ಸನ್ನದುದಾರ ದೇವರಾಜು ಮಾತನಾಡಿ, ನಾವು ಐದು ಅಂಶಗಳ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಅದರ ಹೊರತಾಗಿ ವೈಯಕ್ತಿಕ ಲಾಭಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ.

ನ.20ರಂದು ನಮ್ಮ ವ್ಯವಹಾರಕ್ಕೆ ತೊಂದರೆ ಮಾಡಿದರೆ ಪೊಲೀಸರಿಗೆ ದೂರು ನೀಡುತ್ತೇವೆ. ರಾಜ್ಯದ ಎಲ್ಲ ಭಾಗಗಳಲ್ಲೂ ಇದೇ ರೀತಿ ಸಭೆ ನಡೆಸಿ, ಬಂದ್ ವಿರೋಧಿಸಲಿದ್ದೇವೆ ಎಂದು ತಿಳಿಸಿದರು.

ಇದೆ ಸಂಧರ್ಭದಲ್ಲಿ ಸಿ.ಜಿ.ಗಂಗಾಧರ್, ಪಿ.ದೇವರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page